ಕಕ್ಷ ತಾರತಮ್ಯ ಸಂಧಿ
16 verses
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಶ್ರೀರಮಣ ಸರ್ವೇಶ ಸರ್ವಗ ಸಾರಭೋಕ್ತ ಸ್ವತಂತ್ರ ದೋಷ ವಿದೂರ ಜ್ಞಾನಾನಂದ ಬಲೈಶ್ವರ್ಯ ಸುಖ ಪೂರ್ಣ ಮೂರುಗುಣ ವರ್ಜಿತ ಸಗುಣ ಸಾಕಾರ ವಿಶ್ವ ಸ್ಥಿತಿ ಲಯೋದಯ ಕಾರಣ ಕೃಪಾಸಾಂದ್ರ ನರಹರೆ ಸಲಹೊ ಸಜ್ಜನರ||1|| ನಿತ್ಯ ಮುಕ್ತಳೆ ನಿರ್ವಿಕಾರಳೆ ನಿತ್ಯ ಸುಖ ಸಂಪೂರ್ಣೆ ನಿತ್ಯಾನಿತ್ಯ ಜಗದಾಧಾರೆ ಮುಕ್ತಾಮುಕ್ತ ಗಣ ವಿನುತೆ ಚಿತ್ತೈಸು ಬಿನ್ನಪವ ಶ್ರೀ ಪುರುಷೋತ್ತಮನ ವಕ್ಷೋ ನಿವಾಸಿನಿ ಭೃತ್ಯ ವರ್ಗವ ಕಾಯೆ ತ್ರಿಜಗನ್ಮಾತೆ ವಿಖ್ಯಾತೆ||2|| ರೋಮ ಕೂಪಗಳಲ್ಲಿ ಪೃಥ್ ಪೃಥಕು ಆ ಮಹಾ ಪುರುಷನ ಸ್ವಮೂರ್ತಿ ತಾಮರಸಜಾಂಡಗಳ ತದ್ಗತ ವಿಶ್ವ ರೂಪಗಳ ಶ್ರೀ ಮಹಿಳೆ ರೂಪಗಳ ಗುಣಗಳ ಸೀಮೆಗಾಣದೆ ಯೋಚಿಸುತ ಮಮ ಸ್ವಾಮಿ ಮಹಿಮೆಯದು ಎಂತೋ ಎಂದು ಅಡಿಗಡಿಗೆ ಬೆರಗಾದೆ||3|| ಒಂದು ಅಜಾಂಡದೊಳು ಒಂದು ರೂಪದೊಳು ಒಂದು ಅವಯವದೊಳು ಒಂದು ನಖದೊಳಗೆ ಒಂದು ಗುಣಗಳ ಪಾರುಗಾಣದೆ ಕೃತ ಪುಟಾಂಜಲಿಯಿಂ ಮಂದಜಾಸನ ಪುಳಕ ಪುಳಕಾನಂದ ಬಾಷ್ಪ ತೊದಲು ನುಡಿಗಳಿಂದ ಇಂದಿರಾವಲ್ಲಭನ ಮಹಿಮೆ ಗಂಭೀರ ತೆರವೆಂದ||4|| ಏನು ಧನ್ಯರೋ ಬ್ರಹ್ಮ ಗುರು ಪವಮಾನ ರಾಯರು ಈ ಪರಿಯಲಿ ರಮಾ ನಿವಾಸನ ವಿಮಲ ಲಾವಣ್ಯ ಅತಿಶಯಗಳನು ಸಾನುರಾಗದಿ ನೋಡಿ ಸುಖಿಪ ಮಹಾನುಭಾವರ ಭಾಗ್ಯವೆಂತೋ ಭವಾನಿಧವನಿಗೆ ಅಸಾಧ್ಯವೆನಿಸಲು ನರರ ಪಾಡೇನು||5|| ಆ ಪಿತಾಮಹ ನೂರು ಕಲ್ಪ ರಮಾಪತಿಯ ಗುಣ ಜಪಿಸಿ ಒಲಿಸಿ ಮಹಾ ಪರಾಕ್ರಮ ಹನುಮ ಭೀಮ ಆನಂದ ಮುನಿಯೆನಿಸಿ ಆ ಪರಬ್ರಹ್ಮನ ಸುನಾಭೀ ಕೂಪಸಂಭವ ನಾಮದಲಿ ಮೆರೆವ ಆ ಪಯೋಜಾಸನ ಸಮೀರರಿಗೆ ಅಭಿನಮಿಪೆ ಸತತ||6|| ವಾಸುದೇವನ ಮೂರ್ತಿ ಹೃದಯ ಆಕಾಶ ಮಂಡಲ ಮಧ್ಯದಲಿ ತಾರೇಶನಂದದಿ ಕಾಣುತ ಅತಿ ಸಂತೋಷದಲಿ ತುತಿಪ ಆ ಸರಸ್ವತಿ ಭಾರತೀಯರಿಗೆ ನಾ ಸತತ ವಂದಿಸುವೆ ಪರಮೋಲ್ಲಾಸದಲಿ ಸುಜ್ಞಾನ ಭಕುತಿಯ ಸಲಿಸಲಿ ಎಮಗೆಂದು||7|| ಜಗದುದರನ ಸುರೋತ್ತಮನ ನಿಜಪೆಗಳೊಂತಾತು ಕರಾಬ್ಜದೊಳು ಪದಯುಗ ಧರಿಸಿ ನಖ ಪಂಕ್ತಿಯೊಳು ರಮಣೀಯ ತರವಾದ ನಗಧರನ ಪ್ರತಿಬಿಂಬ ಕಾಣುತ ಮಿಗೆ ಹರುಷದಿಂ ಪೊಗಳಿ ಹಿಗ್ಗುವ ಖಗ ಕುಲಾಧಿಪ ಕೊಡಲಿ ಮಂಗಳ ಸರ್ವ ಸುಜನರಿಗೆ||8|| ಯೋಗಿಗಳ ಹೃದಯಕೆ ನಿಲುಕ ನಿಗಮಾಗಮೈಕ ವಿನುತನ ಪರಮಾನುರಾಗದಲಿ ದ್ವಿಸಹಸ್ರ ಜಿಹ್ವೆಗಳಿಂದ ವರ್ಣಿಸುವ ಭೂಗಗನ ಪಾತಾಳ ವ್ಯಾಪ್ತನ ಯೋಗ ನಿದ್ರಾಸ್ಪದನು ಎನಿಪ ಗುರು ನಾಗರಾಜನ ಪದಕೆ ನಮಿಸುವೆ ಮನದೊಳು ಅನವರತ||9|| ದಕ್ಷ ಯಜ್ಞ ವಿಭಂಜನನೆ ವಿರುಪಾಕ್ಷ ವೈರಾಗ್ಯಾಧಿಪತಿ ಸಂರಕ್ಷಿಸೆಮ್ಮನು ಸರ್ವಕಾಲದಿ ಸನ್ಮುದವನಿತ್ತು ಯಕ್ಷಪತಿ ಸಖ ಯಜಪರಿಗೆ ಸುರವೃಕ್ಷ ವೃಕ್ಷದಾನುಜಾರಿ ಲೋಕಾಧ್ಯಕ್ಷ ಶುಕ ದೂರ್ವಾಸ ಜೈಗೀಷವ್ಯ ಸಂತೈಸು||10|| ನಂದಿವಾಹನ ನಳಿನಿಧರ ಮೌಳಿ ಇಂದು ಶೇಖರ ಶಿವ ತ್ರಿಯಂಬಕ ಅಂಧಕಾಸುರ ಮಥನ ಗಜ ಶಾರ್ದೂಲ ಚರ್ಮಧರ ಮಂದಜಾಸನ ತನಯ ತ್ರಿಜಗದ್ವಂದ್ಯ ಶುದ್ಧ ಸ್ಫಟಿಕ ಸನ್ನಿಭ ವಂದಿಸುವೆನು ಅನವರತ ಕರುಣಿಸಿ ಕಾಯೋ ಮಹದೇವ||11|| ಹತ್ತು ಕಲ್ಪದಿ ಲವ ಜಲಧಿಯೊಳು ಉತ್ತಮ ಶ್ಲೋಕನ ಒಲಿಸಿ ಕೃತಕ್ರುತ್ಯನಾಗಿ ಜಗತ್ಪತಿಯ ನೇಮದಿ ಕುಶಾಸ್ತ್ರಗಳ ಬಿತ್ತರಿಸಿ ಮೋಹಿಸಿ ದುರಾತ್ಮರ ನಿತ್ಯ ನಿರಯ ನಿವಾಸರೆನಿಸಿದ ಕೃತ್ತಿ ವಾಸನೆ ನಮಿಪೆ ಪಾಲಿಸೊ ಪಾರ್ವತೀ ರಮಣ||12|| ಫಣಿ ಫಣಾoಚಿತ ಮಕುಟ ರಂಜಿತ ಕ್ವಣಿತ ಡಮರು ತ್ರಿಶೂಲ ಶಿಖಿ ದಿನ ಮಣಿ ನಿಶಾಕರ ನೇತ್ರ ಪರಮ ಪವಿತ್ರ ಸುಚರಿತ್ರ ಪ್ರಣತ ಕಾಮದ ಪ್ರಮಥ ಸುರಮುನಿ ಗಣ ಸುಪೂಜಿತ ಚರಣಯುಗ ರಾವಣ ಮದ ವಿಭಂಜನ ಶೇಷ ಪದ ಅರ್ಹನು ಅಹುದೆಂದು||13|| ಕಂಬುಪಾಣಿಯ ಪರಮ ಪ್ರೇಮ ನಿತಂಬಿನಿಯರು ಎಂದೆನಿಪ ಲಕ್ಷಣೆ ಜಾಂಬವತಿ ಕಾಳಿಂದಿ ನೀಲಾ ಭದ್ರ ಸಖ ವಿಂದಾರೆಂಬ ಷಣ್ಮಹಿಷಿಯರ ದಿವ್ಯ ಪದಾಂಬುಜಗಳಿಗೆ ನಮಿಪೆ ಮಮ ಹೃದಯಾಂಬರದಿ ನೆಲೆಸಲಿ ಬಿಡದೆ ತಮ್ಮರಸನ ಒಡಗೂಡಿ||14|| ಆ ಪರಂತಪನ ಒಲುಮೆಯಿಂದ ಸದಾ ಅಪರೋಕ್ಷಿಗಳೆನಿಸಿ ಭಗವದ್ರೂಪ ಗುಣಗಳ ಮಹಿಮೆ ಸ್ವಪತಿಗಳ ಆನನದಿ ತಿಳಿವ ಸೌಪರ್ಣಿ ವಾರುಣಿ ನಗಾತ್ಮಜರ ಆಪನಿತು ಬಣ್ಣಿಸುವೆ ಎನ್ನ ಮಹಾಪರಾಧಗಳ ಎಣಿಸದೆ ಈಯಲಿ ಪರಮ ಮಂಗಳವ||15|| ತ್ರಿದಿವತರು ಮಣಿ ಧೇನುಗಳಿಗೆ ಆಸ್ಪದನೆನಿಪ ತ್ರಿದಶಾಲಯಾಬ್ಧಿಗೆ ಬದರನಂದದಲಿ ಒಪ್ಪುತಿಪ್ಪ ಉಪೇಂದ್ರ ಚಂದ್ರಮನ ಮೃಧು ಮಧುರ ಸುಸ್ತವನದಿಂದಲಿ ಮಧು ಸಮಯ ಪಿಕನಂತೆ ಪಾಡುವ ಮುದಿರ ವಾಹನನಂಘ್ರಿ ಯುಗ್ಮಂಗಳಿಗೆ ನಮಿಸುವೆನು||16|| ಕೃತಿ ರಮಣ ಪ್ರದ್ಯುಮ್ನ ದೇವನ ಅತುಳ ಬಲ ಲಾವಣ್ಯ ಗುಣ ಸಂತತ ಉಪಾಸನ ಕೇತು ಮಾಲಾ ಖಂಡದೊಳು ರಚಿಪ ರತಿ ಮನೋಹರನಂಘ್ರಿ ಕಮಲಕೆ ನತಿಸುವೆನು ಭಕುತಿಯಲಿ ಮಮ ದುರ್ಮತಿ ಕಳೆದು ಸನ್ಮತಿಯನು ಈಯಲಿ ನಿರುತ ಎಮಗೊಲಿದು||17|| ಚಾರುತರ ನವವಿಧ ಭಕುತಿ ಗಂಭೀರ ವಾರಾಶಿಯೊಳು ಪರಮೋದಾರ ಮಹಿಮನ ಹೃದಯ ಫಣಿಪತಿ ಪೀಠದಲಿ ಭಜಿಪ ಭೂರಿ ಕರ್ಮಾಕರನು ಎನಿಸುವ ಶರೀರಮಾನಿ ಪ್ರಾಣಪತಿ ಪದ ವಾರಿರುಹಕೆ ಅನಮಿಪೆ ಮದ್ಗುರುರಾಯನು ಅಹುದೆಂದು||18|| ವಿತತ ಮಹಿಮನ ವಿಶ್ವತೋ ಮುಖನ ಅತುಳ ಭುಜ ಬಲ ಕಲ್ಪತರುವು ಆಶ್ರಿತರೆನಿಸಿ ಸಕಲ ಇಷ್ಟ ಪಡೆದು ಅನುದಿನದಿ ಮೋದಿಸುವ ರತಿ ಸ್ವಯಂಭುವ ದಕ್ಷ ವಾಚಸ್ಪತಿ ಬಿಡೌಜನ ಮಡದಿ ಶಚಿ ಮನ್ಮಥ ಕುಮಾರ ಅನಿರುದ್ಧರು ಎಮಗೀಯಲಿ ಸುಮಂಗಲವ||19|| ಭವ ವನದಿ ನವ ಪೋತ ಪುಣ್ಯ ಶ್ರವಣ ಕೀರ್ತನ ಪಾದವನರುಹ ಭವನ ನಾವಿಕನಾಗಿ ಭಕುತರ ತಾರಿಸುವ ಬಿಡದೆ ಪ್ರವಹ ಮಾರುತದೇವ ಪರಮೋತ್ಸವ ವಿಶೇಷ ನಿರಂತರ ಮಹಾ ಪ್ರವಹದಂದದಿ ಕೊಡಲಿ ಭಗವದ್ಭಕ್ತ ಸಂತತಿಗೆ||20|| ಜನರನು ಉದ್ಧರಿಸುವೆನೆನುತ ನಿಜ ಜನಕನ ಅನುಮತದಲಿ ಸ್ವಯಂಭುವ ಮನುವಿನಿಂದಲಿ ಪಡೆದೆ ಸುಕುಮಾರಕರನು ಒಲುಮೆಯಲಿ ಜನನಿ ಶತ ರೂಪಾ ನಿತಂಬಿನಿ ಮನವಚನಕಾಯದಲಿ ತಿಳಿದು ಅನುದಿನದಿ ನಮಿಸುವೆ ಕೊಡು ಎಮಗೆ ಸನ್ಮಂಗಳವನೊಲಿದು||21|| ನರನ ನಾರಾಯಣನ ಹರಿಕೃಷ್ಣರ ಪಡೆದೆ ಪುರುಷಾರ್ಥ ತೆರದಲಿ ತರಣಿ ಶಶಿ ಶತರೂಪರಿಗೆ ಸಮನೆನಿಸಿ ಪಾಪಿಗಳ ನಿರಯದೊಳು ನೆಲೆಗೊಳಿಸಿ ಸಜ್ಜನ ನೆರವಿಯನು ಪಾಲಿಸುವ ಔದುಂಬರ ಸಲಹು ಸಲಹೆಮ್ಮ ಬಿಡದಲೆ ಪರಮ ಕರುಣದಲಿ||22|| ಮಧು ವಿರೋಧಿ ಮನುಜ ಕ್ಷೀರೋದಧಿ ಮಥನ ಸಮಯದಲಿ ಉದಯಿಸಿ ನೆರೆ ಕುಧರಜಾ ವಲ್ಲಭನ ಮಸ್ತಕ ಮಂದಿರದಿ ಮೆರೆವ ವಿಧು ತವಾಂಘ್ರಿ ಸರೋಜಾ ಯುಗಳಕೆ ಮಧುಪನಂದದಲಿ ಎರಗಲು ಎನ್ಮನದ ಅಧಿಪ ವಂದಿಪೆನು ಅನುದಿನ ಅಂತಸ್ತಾಪ ಪರಿಹರಿಸು||23|| ಶ್ರೀ ವನರುಹಾಂಬಕನ ನೇತ್ರಗಳೇ ಮನೆಯೆನಿಸಿ ಸಜ್ಜನರಿಗೆ ಕರಾವಲಂಬನವೀವ ತೆರದಿ ಮಯೂಖ ವಿಸ್ತರಿಪ ಆ ವಿವಸ್ವಾನ್ ನೆನಿಸಿ ಕೊಂಬ ವಿಭಾವಸು ಅಹರ್ನಿಶಿಗಳಲಿ ಕೊಡಲೀ ವಸುಂಧರೆಯೊಳು ವಿಪಶ್ಚಿತರೊಡನೆ ಸುಜ್ಞಾನ||24|| ಲೋಕ ಮಾತೆಯ ಪಡೆದು ನೀ ಜಗದೇಕಪಾತ್ರನಿಗಿತ್ತ ಕಾರಣ ಶ್ರೀ ಕುಮಾರಿ ಸಮೇತ ನೆಲಸಿದ ನಿನ್ನ ಮಂದಿರದಿ ಆ ಕಮಲಭವ ಮುಖರು ಬಿಡದೆ ಪರಾಕೆನುತ ನಿಂದಿಹರೋ ಗುಣ ರತ್ನಾಕರನೆ ಬಣ್ಣಿಸಲಳವೆ ಕೊಡು ಎಮಗೆ ಸನ್ಮನವ||25|| ಪಣೆಯೊಳೊಪ್ಪುವ ತಿಲಕ ತುಳಸೀ ಮಣಿಗಣಾನ್ವಿತ ಕಂಠ ಕರದಲಿ ಕ್ವಣಿತ ವೀಣಾ ಸುಸ್ವರದಿ ಬಹು ತಾಳ ಗತಿಗಳಲಿ ಪ್ರಣವ ಪ್ರತಿಪಾದ್ಯನ ಗುಣಂಗಳ ಕುಣಿದು ಪಾಡುತ ಪರಮ ಸುಖ ಸಂದಣಿಯೊಳು ಆಡುವ ದೇವರ್ಷಿ ನಾರದರಿಗೆ ಅಭಿನಮಿಪೆ||26|| ಆ ಸರಸ್ವತಿ ತೀರದಲಿ ಬಿನ್ನೈಸಲು ಆ ಮುನಿಗಳ ನುಡಿಗೆ ಜಡಜಾಸನ ಮಹೇಶ ಅಚ್ಯುತರ ಲೋಕಂಗಳಿಗೆ ಪೋಗಿ ತಾ ಸಕಲ ಗುಣಗಳ ವಿಚಾರಿಸಿ ಕೇಶವನೆ ಪರದೈವವು ಎಂದು ಉಪದೇಶಿಸುವ ಭೃಗು ಮುನಿಪ ಕೊಡಲಿ ಎಮಗೆ ಅಖಿಳ ಪುರುಷಾರ್ಥ||27|| ಬಿಸರುಹಾಂಬಕನ ಆಜ್ಞೆಯಲಿ ಸುಮನಸ ಮುಖನು ತಾನೆನಿಸಿ ನಾನಾ ರಸಗಳುಳ್ಳ ಹರಿಸ್ಸುಗಳನು ಅವರವರಿಗೊಯ್ದು ಈವ ವಸುಕುಲಾಧಿಪ ಯಜ್ಞಪುರುಷನ ಅಸಮ ಬಲ ರೂಪಂಗಳಿಗೆ ವಂದಿಸುವೆ ಜ್ಞಾನ ಯಶಸ್ಸು ವಿದ್ಯ ಸುಬುದ್ಧಿ ಕೊಡಲೆಮಗೆ||28|| ತಾತನ ಅಪ್ಪಣೆಯಿಂದ ನೀ ಪ್ರಖ್ಯಾತಿಯುಳ್ಳ ಅರವತ್ತು ಮಕ್ಕಳ ಪ್ರೀತಿಯಿಂದಲಿ ಪಡೆದು ಅವರವರಿಗಿತ್ತು ಮನ್ನಿಸಿದೆ ವೀತಿ ಹೋತ್ರನ ಸಮಳೆನಿಸುವ ಪ್ರಸೂತಿ ಜನನಿ ತ್ವದಂಘ್ರಿ ಕಮಲಕೆ ನಾ ತುತಿಸಿ ತಲೆಬಾಗುವೆ ಎಮ್ಮ ಕುಟುಂಬ ಸಲಹುವುದು||29|| ಶತ ಧೃತಿಯ ಸುತರೀರ್ವರ ಉಳಿದ ಅಪ್ರತಿಮ ಸುತಪೋ ನಿಧಿಗಳ ಪರಾಜಿತನ ಸುಸಮಾಧಿಯೊಳು ಇರಿಸಿ ಮೂರ್ಲೋಕದೊಳು ಮೆರೆವ ವ್ರತಿವರ ಮರೀಚಿ ಅತ್ರಿ ಪುಲಹಾ ಕ್ರತು ವಸಿಷ್ಠ ಪುಲಸ್ತ್ಯ ವೈವಸ್ವತನು ವಿಶ್ವಾಮಿತ್ರ ಅಂಗಿರರ ಅಂಘ್ರಿಗೆರಗುವೆನು||30|| ದ್ವಾದಶ ಆದಿತ್ಯರೊಳು ಮೊದಲಿಗನಾದ ಮಿತ್ರ ಪ್ರವಹ ಮಾನಿನಿಯಾದ ಪ್ರಾವಹಿ ನಿರ್ಋತಿ ನಿರ್ಜರ ಗುರು ಮಹಿಳೆ ತಾರಾ ಈ ದಿವೌಕಸರು ಅನುದಿನ ಆಧಿವ್ಯಾಧಿ ಉಪಟಳವ ಅಳಿದು ವಿಬುಧರಿಗೆ ಆದರದಿ ಕೊಡಲಿ ಅಖಿಳ ಮಂಗಳವ ಆವ ಕಾಲದಲಿ||31|| ಮಾನನಿಧಿಗಳು ಎನಿಸುವ ವಿಷ್ವಕ್ಸೇನ ಧನಪ ಗಜಾನನರಿಗೆ ಸಮಾನರು ಎಂಭತ್ತೈದು ಶೇಷ ಶತಸ್ಥ ದೇವಗಣಕೆ ಆ ನಮಿಸುವೆನು ಬಿಡದೆ ಮಿಥ್ಯಾ ಜ್ಞಾನ ಕಳೆದು ಸುಬುದ್ಧಿನಿತ್ತು ಸದಾನುರಾಗದಲಿ ಎಮ್ಮ ಪರಿಪಾಲಿಸಲೆಂದೆನುತ||32|| ಭೂತ ಮರುತನು ಅವಾಂತರ ಅಭಿಮಾನಿ ತಪಸ್ವಿ ಮರೀಚಿ ಮುನಿ ಪುರುಹೂತ ನಂದನ ಪಾದಮಾನಿ ಜಯಂತರು ಎಮಗೊಲಿದು ಕಾತರವ ಪುಟ್ಟಿಸದೆ ವಿಷಯದಿ ವೀತಭಯನ ಪದಾಬ್ಜದಲಿ ವಿಪರೀತ ಬುದ್ಧಿಯನು ಈಯದೆ ಸದಾ ಪಾಲಿಸಲೆಮ್ಮ||33|| ಓದಿಸುವ ಗುರುಗಳನು ಜರಿದು ಸಹ ಓದುಗರಿಗೆ ಉಪದೇಶಿಸಿದ ಮಹದಾದಿ ಕಾರಣ ಸರ್ವಗುಣ ಸಂಪೂರ್ಣ ಹರಿಯೆಂದು ವಾದಿಸುವ ತತ್ಪತಿಯ ತೋರೆಂದು ಆ ದನುಜ ಬೆಸಗೊಳಲು ಸ್ತಂಭದಿ ಶ್ರೀದನ ಆಕ್ಷಣ ತೋರಿಸಿದ ಪ್ರಹ್ಲಾದ ಸಲಹೆಮ್ಮ||34|| ಬಲಿ ಮೊದಲು ಸಪ್ತ ಇಂದ್ರರು ಇವರಿಗೆ ಕಲಿತ ಕರ್ಮಜ ದಿವಿಜರು ಎಂಬರು ಉಳಿದ ಏಕಾದಶ ಮನುಗಳು ಉಚಿಥ್ಥ್ಯ ಚವನ ಮುಖ ಕುಲರ್ಷಿಗಳು ಎಂಭತ್ತು ಹೈಹಯ ಇಳಿಯ ಕಂಪನಗೈದ ಪೃಥು ಮಂಗಳ ಪರೀಕ್ಷಿತ ನಹುಷ ನಾಭಿ ಯಯಾತಿ ಶಶಿಬಿಂದು||35|| ಶತಕ ಸಂಕೇತ ಉಳ್ಳ ಪ್ರಿಯವ್ರತ ಭರತ ಮಾಂಧಾತ ಪುಣ್ಯಾಶ್ರಿತರು ಜಯವಿಜಯಾದಿಗಳು ಗಂಧರ್ವರೆಂಟು ಜನ ಹುತವಹಜ ಪಾವಕ ಸನಾತನ ಪಿತೃಗಳು ಎಳ್ವರು ಚಿತ್ರಗುಪ್ತರು ಪ್ರತಿದಿನದಿ ಪಾಲಿಸಲಿ ತಮ್ಮವನೆಂದು ಎಮಗೊಲಿದು||36|| ವಾಸವಾಲಯ ಶಿಲ್ಪ ವಿಮಲ ಜಲಾಶಯಗಳೊಳು ರಮಿಪ ಊರ್ವಶಿ ಭೇಶ ರವಿಗಳ ರಿಪುಗಳೆನಿಸುವ ರಾಹುಕೇತುಗಳು ಶ್ರೀಶ ಪದ ಪಂಥಾನ ಧೂಮಾರ್ಚೀರ ದಿವಿಜರು ಕರ್ಮಜರಿಗೆ ಸದಾ ಸಮಾನ ದಿವೌಕಸರು ಕೊಡಲಿ ಎಮಗೆ ಮಂಗಳವ||37|| ದ್ಯುನದಿ ಶ್ಯಾಮಲ ಸಂಜ್ಞ ರೋಹಿಣಿ ಘನಪ ಪರ್ಜನ್ಯ ಅನಿರುದ್ಧನ ವನಿತೆ ಬ್ರಹ್ಮಾಂಡಾಭಿಮಾನಿ ವಿರಾಟ ದೇವಿಯರ ನೆನೆವೆನು ಆ ನಲವಿಂದೆ ದೇವಾನನ ಮಹಿಳೆ ಸ್ವಾಹಾಖ್ಯರು ಆಲೋಚನೆ ಕೊಡಲಿ ನಿರ್ವಿಘ್ನದಿಂ ಭಗವದ್ಗುಣoಗಳಲಿ||38|| ವಿಧಿಪಿತನ ಪಾದಾಂಬುಜಗಳಿಗೆ ಮಧುಪನಾಂತೆ ವಿರಾಜಿಪಾಮಲ ಉದಕಗಳಿಗೆ ಸದಾಭಿಮಾನಿಯು ಎಂದೆನಿಸಿಕೊಂಬ ಬುಧಗೆ ನಾ ವಂದಿಸುವೆ ಸಮ್ಮೋದದಿ ನಿರಂತರವು ಒಲಿದೆಮಗೆ ಅಭ್ಯುದಯ ಪಾಲಿಸಲೆಂದು ಪರಮೋತ್ಸವದೊಳು ಅನುದಿನದಿ||39|| ಶ್ರೀ ವಿರಿಂಚಾದ್ಯರ ಮನಕೆ ನಿಲುಕಾವ ಕಾಲಕೆ ಜನನ ರಹಿತನ ತಾವೊಲಿಸಿ ಮಗನೆಂದು ಮುದ್ದಿಸಿ ಲೀಲೆಗಳ ನೋಳ್ಪ ದೇವಕಿಗೆ ವಂದಿಪೆ ಯಶೋದಾ ದೇವಿಗೆ ಆನಮಿಸುವೆನು ಪರಮ ಕೃಪಾವಲೋಕನದಿಂದ ಸಲಹುವುದು ಎಮ್ಮ ಸಂತತಿಯ||40|| ಪಾಮರರನ ಪವಿತ್ರಗೈಸುವ ಶ್ರೀ ಮುಕುಂದನ ವಿಮಲ ಮಂಗಳ ನಾಮಗಳಿಗೆ ಅಭಿಮಾನಿಯಾದ ಉಷಾಖ್ಯ ದೇವಿಯರು ಭೂಮಿಯೊಳಗುಳ್ಳ ಅಖಿಳ ಸಜ್ಜನರ ಆಮಯಾದಿಗಳ ಅಳಿದು ಸಲಹಲಿ ಆ ಮರುತ್ವಾನ್ ಮನೆಯ ವೈದ್ಯರ ರಮಣಿ ಪ್ರತಿದಿನದಿ||41|| ಪುರುಟ ಲೋಚನ ನಿನ್ನ ಕದ್ದೊಯ್ದಿರಲು ಪ್ರಾರ್ಥಿಸೆ ದೇವತೆಗಳ ಉತ್ತರವ ಲಾಲಿಸಿ ತಂದ ವರಾಹ ರೂಪ ತಾನಾಗಿ ಧರಣಿ ಜನನಿ ನಿನ್ನ ಪಾದಕ್ಕೆರಗಿ ಬಿನ್ನೈಸುವನು ಪಾದಸ್ಪರ್ಶ ಮೊದಲಾದ ಅಖಿಳ ದೋಷಗಳು ಎಣಿಸದಿರೆಂದು||42|| ವನಧಿವಸನೆ ವರಾದ್ರಿ ನಿಚಯ ಸ್ತನವಿರಾಜಿತೆ ಚೇತನಾಚೇತನ ವಿಧಾರಕೆ ಗಂಧ ರಸ ರೂಪಾದಿ ಗುಣ ವಪುಷೆ ಮುನಿಕುಲೋತ್ತಮ ಕಶ್ಯಪನ ನಿಜತನುಜೆ ನಿನಗೆ ಅನಮಿಪೆ ಎನ್ನವಗುಣಗಳು ಎಣಿಸದೆ ಪಾಲಿಪುದು ಪರಮಾತ್ಮನರ್ಧಾಂಗಿ||43|| ಹರಿ ಗುರುಗಳ ಅರ್ಚಿಸದ ಪಾಪಾತ್ಮರನ ಶಿಕ್ಷಿಸಲೋಸುಗ ಶನೈಶ್ಚರನೆನಿಸಿ ದುಷ್ಫಲಗಳೀವೆ ನಿರಂತರದಿ ಬಿಡದೆ ತರಣಿ ನಂದನ ನಿನ್ನ ಪಾದಾಂಬುರುಹಗಳಿಗೆ ಆ ನಮಿಪೆ ಬಹು ದುಸ್ತರ ಭವಾರ್ಣದಿ ಮಗ್ನನಾದೆನ್ನ ಉದ್ಧರಿಸಬೇಕು||44|| ನಿರತಿಶಯ ಸುಜ್ಞಾನ ಪೂರ್ವಕ ವಿರಚಿಸುವ ನಿಷ್ಕಾಮ ಕರ್ಮಗಳರಿತು ತತ್ತತ್ಕಾಲದಲಿ ತಜ್ಜನ್ಯ ಫಲರಸವ ಹರಿಯ ನೇಮದಲಿ ಉಣಿಸಿ ಬಹುಜೀವರಿಗೆ ಕರ್ಮಪನೆನಿಪ ಗುರುಪುಷ್ಕರನು ಸತ್ಕ್ರಿಯಂಗಳಲಿ ನಿರ್ವಿಘ್ನತೆಯ ಕೊಡಲಿ||45|| ಶ್ರೀನಿವಾಸನ ಪರಮ ಕಾರುಣ್ಯಾನಿ ವಾಸಸ್ಥಾನರು ಎನಿಪ ಕೃಶಾನುಜರು ಸಹಸ್ರ ಷೋಡಶ ಶತರು ಶ್ರೀ ಕೃಷ್ಣ ಮಾನಿನಿಯರು ಎಪ್ಪತ್ತು ಯಕ್ಷರು ದಾನವರು ಮೂವತ್ತು ಚಾರಣ ಅಜಾನಜ ಅಮರರು ಅಪ್ಸರರು ಗಂಧರ್ವರಿಗೆ ನಮಿಪೆ||46|| ಕಿನ್ನರರು ಗುಹ್ಯಕರು ರಾಕ್ಷಸ ಪನ್ನಗರು ಪಿತೃಗಳು ಸಿದ್ಧರು ಸನ್ನುತ ಅಜಾನಜರು ಸಮರು ಇವರು ಅಮರ ಯೋನಿಜರು ಇನ್ನಿವರ ಗಣವೆಂತು ಬಣ್ಣಿಸಲು ಎನ್ನೊಳವೆ ಕರುಣದಲಿ ಪರಮಾಪನ್ನ ಜನರಿಗೆ ಕೊಡಲಿ ಸನ್ಮುದ ಪರಮ ಸ್ನೇಹದಲಿ||47|| ಆ ಯಮುನೆಯೊಳು ಸಾದರದಿ ಕಾತ್ಯಾಯನೀ ವ್ರತಧರಿಸಿ ಕೆಲರು ದಯಾಯುಧನೆ ಪತಿಯೆಂದು ಕೆಲವರು ಜಾರತನದಲ್ಲಿ ವಾಯುಪಿತನೊಲಿಸಿದರು ಈರ್ವಗೆ ತೋಯ ಸರಸರ ಪಾದಕಮಲಕೆ ನಾ ಎರಗುವೆ ಮನೋರಥಂಗಳ ಸಲಿಸಲಿ ಅನುದಿನದಿ||48|| ನೂರುಮುನಿಗಳ ಉಳಿದು ಮೇಲಣ ನೂರು ಕೋಟಿ ತಪೋಧರನ ಪಾದಾರವಿಂದಕೆ ಮುಗಿವೆ ಕರಗಳನು ಉದ್ಧರಿಸಲೆಂದು ಮೂರು ಸಪ್ತ ಶತಾಹ್ವಯರ ತೊರೆದು ಈ ಋಷಿಗಳ ಅನಂತರಲಿಹ ಭೂರಿ ಪಿತೃಗಳು ಕೊಡಲಿ ಎಮಗೆ ಸಂತತ ಸುಮಂಗಳವ||49|| ಪಾವನಕೆ ಪಾವನನು ಎನಿಸುವ ರಮಾ ವಿನೋದಿಯ ಗುಣಗಣoಗಳ ಸಾವಧಾನದಲಿ ಏಕ ಮಾನಸರಾಗಿ ಸುಸ್ವರದಿ ಆ ವಿಬುಧಪತಿ ಸಭೆಯೊಳಗೆ ನಾನಾ ವಿಲಾಸದಿ ಪಾಡಿ ಸುಖಿಸುವ ದೇವ ಗಂಧರ್ವರು ಕೊಡಲಿ ಎಮಗೆ ಅಖಿಳ ಪುರುಷಾರ್ಥ||50|| ಭುವನ ಪಾವನ ಮಾಳ್ಪ ಲಕ್ಷ್ಮೀ ಧವನ ಮಂಗಳ ದಿವ್ಯ ನಾಮ ಸ್ತವನಗೈವ ಮನುಷ್ಯ ಗಂಧರ್ವರಿಗೆ ವಂದಿಸುವೆ ಪ್ರವರ ಭೂಭುಜರ ಉಳಿದು ಮಧ್ಯಮ ಕುವಲಯಪರು ಎಂದು ಎನಿಸಿಕೊಂಬರ ದಿವಸ ದಿವಸಂಗಳಲಿ ನೆನೆವನು ಕರಣ ಶುದ್ಧಿಯಲಿ||51|| ಶ್ರೀ ಮುಕುಂದನ ಮೂರ್ತಿಸಲೆ ಸೌದಾಮಿನಿಯೋಳ್ ಹೃದಯ ವಾರಿಜ ವ್ಯೋಮ ಮಂಡಲ ಮಧ್ಯದಲಿ ಕಾಣುತಲಿ ಮೋದಿಸುವ ಆ ಮನುಷ್ಯೋತ್ತಮರ ಪದಯುಗ ತಾಮರಸಗಳಿಗೆ ಎರಗುವೆ ಸದಾ ಕಾಮಿತಾರ್ಥಗಳಿತ್ತು ಸಲಹಲಿ ಪ್ರಣತ ಜನತತಿಯ||52|| ಈ ಮಹೀ ಮಂಡಲದೊಳಿಹ ಗುರು ಶ್ರೀಮದಾಚಾರ್ಯರ ಮತಾನುಗರು ಆ ಮಹಾವೈಷ್ಣವರ ವಿಷ್ಣು ಪದಾಬ್ಜ ಮಧುಕರರ ಸ್ತೋಮಕೆ ಅನಮಿಸುವೆನು ಅವರವರ ನಾಮಗಳನು ಏಂ ಪೇಳ್ವೆ ಬಹುವಿಧ ಯಾಮ ಯಾಮಂಗಳಲಿ ಬೋಧಿಸಲಿ ಎಮಗೆ ಸನ್ಮತಿಯ||53|| ಮಾರನಯ್ಯನ ಕರುಣ ಪಾರಾವಾರ ಮುಖ್ಯ ಸುಪಾತ್ರರು ಎನಿಪ ಸರೋರುಹಾಸನ ವಾಣಿ ರುದ್ರ ಇಂದ್ರಾದಿ ಸುರನಿಕರ ತಾರತಮ್ಯಾತ್ಮಕ ಸುಪದ್ಯಗಳ ಆರು ಪಠಿಸುವರು ಆ ಜನರಿಗೆ ರಮಾರಮಣ ಪೂರೈಸಲಿ ಈಪ್ಸಿತ ಸರ್ವಕಾಲದಲಿ||54|| ಮೂರು ಕಾಲಗಳಲ್ಲಿ ತುತಿಸೆ ಶರೀರ ವಾನ್ಗ್ಮನಃ ಶುದ್ಧಿ ಮಾಳ್ಪುದು ದೂರಗೈಸುವದು ಅಖಿಳ ಪಾಪ ಸಮೂಹ ಪ್ರತಿದಿನದಿ ಚೋರಭಯ ರಾಜಭಯ ನಕ್ರ ಚಮೂರ ಶಸ್ತ್ರ ಜಲಾಗ್ನಿ ಭೂತ ಮಹೋರಗ ಜ್ವರ ನರಕ ಭಯ ಸಂಭವಿಸದು ಎಂದೆಂದು||55|| ಜಯಜಯತು ತ್ರಿಜಗದ್ವಿಲಕ್ಷಣ ಜಯಜಯತು ಜಗದೇಕ ಕಾರಣ ಜಯಜಯತು ಜಾನಕೀ ರಮಣ ನಿರ್ಗತ ಜರಾಮರಣ ಜಯಜಯತು ಜಾಹ್ನವೀ ಜನಕ ಜಯಜಯತು ದೈತ್ಯ ಕುಲಾಂತಕ ಭವಾಮಯ ಹರ ಜಗನ್ನಾಥ್ ವಿಠಲ ಪಾಹಿಮಾಂ ಸತತ||56||

Bannanje Govindacharya
Rs.238.00

B.N.K Sharma
Rs.1100.00

B.N.K Sharma
Rs.1445.00
*As an Amazon Associate, we earn from qualifying purchases
Advertisement
Banner Ad Space (728x90)